ಕಾಲುಜಾರಿ ಹೊಂಡಕ್ಕೆ ಬಿದ್ದು ಮಹಿಳೆ ಸಾವು

ಕುಮಟಾ: ಕಾಲುಜಾರಿ ಹೊಂಡಕ್ಕೆ ಬಿದ್ದು ಮಹಿಳೆಯೋರ್ವಳು ಮೃತಪಟ್ಟ ಘಟನೆ ಗೋಕರ್ಣ ಸಮೀಪದ ತಲಗೇರಿಯಲ್ಲಿ ನಡೆದಿದೆ. ತಾಲೂಕಿನ ತಲಗೇರಿಯ ಸೋಮಿ ಹುಲಿಯಾ ಗೌಡ (59) ಮೃತ ಮಹಿಳೆ. ಈಕೆ ಗದ್ದೆಯಲ್ಲಿ ಕೃಷಿ ಕಾರ್ಯ ಮುಗಿಸಿ, ವಾಪಸ್ ಮನೆಗೆ ಆಗಮಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಗದ್ದೆಯ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾಳೆ.

ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.