Ashes 2023: ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 5ನೇ ಪಂದ್ಯದಲ್ಲಿ 2 ಕ್ಯಾಚ್ಗಳನ್ನು ಹಿಡಿಯುವ ಮೂಲಕ ಬೆನ್ ಸ್ಟೋಕ್ಸ್ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಗ್ಯಾರಿ ಸೋಬರ್ಸ್ ಹಾಗೂ ಜಾಕ್ಸ್ ಕಾಲಿಸ್ ಹೆಸರಿನಲ್ಲಿದ್ದ ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಬೆನ್ ಸ್ಟೋಕ್ಸ್, ಅಲೆಕ್ಸ್ ಕ್ಯಾರಿ ಹಾಗೂ ಪ್ಯಾಟ್ ಕಮಿನ್ಸ್ ಅವರ ಕ್ಯಾಚ್ಗಳನ್ನು ಹಿಡಿದಿದ್ದರು. ಈ ಕ್ಯಾಚ್ಗಳೊಂದಿಗೆ ಬೆನ್ ಸ್ಟೋಕ್ಸ್ ಟೆಸ್ಟ್ ಕ್ರಿಕೆಟ್ನಲ್ಲಿ 100 ಕ್ಯಾಚ್ಗಳನ್ನು ಹಿಡಿದ ವಿಶೇಷ ಸಾಧನೆ ಮಾಡಿದ್ದಾರೆ.
ಈ ಸಾಧನೆಯೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ 6000 ರನ್, 150 ವಿಕೆಟ್ ಹಾಗೂ 100 ಕ್ಯಾಚ್ಗಳನ್ನು ಹಿಡಿದ ವಿಶ್ವದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೂ ಬೆನ್ ಸ್ಟೋಕ್ಸ್ ಪಾತ್ರರಾಗಿದ್ದಾರೆ.
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ನ ದಂತಕಥೆ ಗ್ಯಾರಿ ಸೋಬರ್ಸ್ ಟೆಸ್ಟ್ ಕ್ರಿಕೆಟ್ನಲ್ಲಿ 6 ಸಾವಿರ ರನ್ ಹಾಗೂ 150 ವಿಕೆಟ್ ಮತ್ತು 100 ಕ್ಯಾಚ್ಗಳನ್ನು ಹಿಡಿದು ಹೊಸ ಇತಿಹಾಸ ನಿರ್ಮಿಸಿದ್ದರು.
ಇದಾದ ಬಳಿಕ ಸೌತ್ ಆಫ್ರಿಕಾದ ಆಲ್ರೌಂಡರ್ ಜಾಕ್ಸ್ ಕಾಲಿಸ್ ಈ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದರು. ಅಂದರೆ ಕಾಲಿಸ್ ಕೂಡ ಟೆಸ್ಟ್ ಕ್ರಿಕೆಟ್ನಲ್ಲಿ 6000 ರನ್, 150 ಹಾಗೂ 100 ಕ್ಯಾಚ್ಗಳ ಸಾಧನೆ ಮಾಡಿದ್ದಾರೆ.
ಇದೀಗ ಈ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರನಾಗಿ ಇಂಗ್ಲೆಂಡ್ ತಂಡದ ಬೆನ್ ಸ್ಟೋಕ್ಸ್ ಹೊರಹೊಮ್ಮಿದ್ದಾರೆ. ಈ ಮೂಲಕ ಗ್ಯಾರಿ ಸೋಬರ್ಸ್ ಹಾಗೂ ಜಾಕ್ಸ್ ಕಾಲಿಸ್ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.