ಹಿರೇಕೈ(ಹಾಲ್ಕಣಿ) ಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಸಂಪ್ರೋಕ್ಷಣ್ಯ ಕಾರ್ಯಕ್ರಮ

ಸಿದ್ದಾಪುರ : ತಾಲೂಕಿನ ಹಿರೇಕೈ(ಹಾಲ್ಕಣಿ) ಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಸಂಪ್ರೋಕ್ಷಣ್ಯ ಕಾರ್ಯಕ್ರಮ ವು ಶನಿವಾರ ನಡೆಯಿತು.
ದೇವಸ್ಥಾನದ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿಸಿ 45 ದಿನಗಳಾದ ಹಿನ್ನಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು
ವಿದ್ವಾನ್ ಕುಮಾರ್ ಭಟ್ ಕೊಳಗಿಬೀಸ್ ಅವರ ಮಾರ್ಗದರ್ಶನದಲ್ಲಿ ಮುಂಜಾನೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಂತರ ಶ್ರೀ ರಾಮೇಶ್ವರ ದೇವರಿಗೆ ವಿಶೇಷ ಪೂಜೆ ನಡೆಯಿತು.
ಎಲ್ಲ ಕಾರ್ಯಕ್ರಮಗಳಲ್ಲೂ ಭಕ್ತರು ಶ್ರದ್ದಾ ಭಕ್ತಿಯಿಂದ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾದರು