ಕುಮಟಾ-ಹೊನ್ನಾವರ ತಾಲೂಕಿನಲ್ಲಿ ಪ್ರವಾಸ ಕೈಗೊಂಡು, ಪ್ರಗತಿ ಪರಿಶೀಲಿಸಿದ ಗಂಗೂ ಬಾಯಿ ಮಾನಕರ್

ಕುಮಟಾ : ಜಿಲ್ಲೆಯ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ರವರು ಇಂದು ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಪ್ರವಾಸ ಕೈಕೊಂಡಿದ್ದರು ಪ್ರವಾಸದುದ್ದಕ್ಕೂ ಜಿಲ್ಲಾಧಿಕಾರಿಗಳು ಸರ್ಕಾರದಿಂದ ಕೈಕೊಂಡ ರಸ್ತೆ, ಕುಡಿಯುವ ನೀರು, ಸೇತುವೆ ಮುಂತಾದ ಕಾಮಗರಿಗಳನ್ನು ಪರಿಶೀಲಿಸಿದರು ಹಾಗೂ ಕುಮಟಾ ತಾಲೂಕಿನ ಮಿರ್ಜಾನ್ ನಲ್ಲಿ ಗ್ರಾಮ ಒನ್ ಕೇಂದ್ರ ಕ್ಕೆ ಬೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು ಹಾಗೆಯೇ ಗ್ರಾಮ ಒನ್ ಕೇಂದ್ರ ಕ್ಕೆ ಬಂದಂತಹ ಫಲಾನುಭವಿಗಳೊಂದಿಗೆ ಗ್ರಾಮ ಒನ್ ಸಿಬ್ಬಂದಿಗಳ ಕಾರ್ಯವೈಖರಿಯ ಬಗ್ಗೆ ಚರ್ಚಿಸಿದರು ಹಾಗೂ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಫಲನುಭವಿಗಳಿಗೆ ತಿಳಿಸಿದರು. ಹಾಗೆಯೇ ತಾಲೂಕಿನ ಬಿ. ಸಿ.ಎಂ ವಿದ್ಯಾರ್ಥಿನಿಲಯಗಳಿಗೆ ತೆರಳಿ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ನೀಡಲಾಗಿದೆಯೇ ಎಂಬುವುದನ್ನು ಪರಿಶೀಲಿಸಿದರು ಬಳಿಕ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ವಿದ್ಯಾರ್ಥಿ ನಿಲಯಗಳಲ್ಲಿ ನೀಡಲಾಗುತ್ತಿರುವ ಅಗತ್ಯ ಸೌಲಭ್ಯಗಳು ಗುಣಮಟ್ಟ ಇರುವುದರ ಬಗ್ಗೆ ಖಚಿತ ಪಡಿಸಿಕೊಂಡರು. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರದ ಕುರಿತು ಚರ್ಚಿಸಿ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳಿಗೆ ಸಾಕಾಗುವಷ್ಟು ಆಹಾರದ ಪೂರೈಕೆ ಕುರಿತು ಮಾಹಿತಿ ಪಡೆದುಕೊಂಡರು. ಒಂದು ವೇಳೆ ವಿದ್ಯಾರ್ಥಿ ನಿಲಯಗಳಲ್ಲಿ ಸಮಸ್ಯೆಗಳಿದ್ದಲ್ಲಿ ನೇರವಾಗಿ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಹಾಗೆಯೇ ಹೊನ್ನಾವರ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಾದ ಬಸಕೆರೆ ಹಾಗೂ ಗೌಂಡಬಳೆಗೆ ಬೇಟಿ ನೀಡಿ ಪ್ರವಾಹ ಸಂತ್ರಸ್ತರೊಂದಿಗೆ ಚರ್ಚಿಸಿ ಅವರುಗಳಿಗೆ ಸಾಂತ್ವನ ಹೇಳಿದರು ಹಾಗೂ ಪ್ರವಾಹದಿಂದ ಆಗಿರುವ ಹಾನಿಗೆ ಸರ್ಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು. ಯಾವುದೇ ಕಾರಣಕ್ಕೂ ಪ್ರವಾಹ ಪೀಡಿತಕ್ಕೆ ಒಳಗಾಗಿರುವ ಪ್ರದೇಶದ ಜನರು ಭಯ ಪಡುವ ಅಗತ್ಯವಿಲ್ಲ ಜಿಲ್ಲಾಡಳಿತ ಸದಾ ನಿಮ್ಮ ಜೊತೆಗಿದ್ದು ಸಂಬಂಧ ಪಟ್ಟ ಸಿಬ್ಬಂದಿಗಳು ದಿನದ 24 ಗಂಟೆ ಕೆಲಸ ನಿರ್ವಹಿಸಲು ಈಗಾಗಲೇ ಕ್ರಮ ವಹಿಸಲಾಗಿದೆ ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಲಾಗುವುದು ಎಂದರು.

ಹಾಗೆಯೇ ಹೊನ್ನಾವರ ತಾಲೂಕಿನ ಅಪ್ಸರಾಕೊಂಡ ಹಾಗೂ ಕಾಸರಕೋಡ ಭೂ ಕುಸಿತ ಸಾಧ್ಯತೆ ಇರುವ ಪ್ರದೇಶಗಳಿಗೆ ಅಧಿಕಾರಿ ತಂಡಗಳೊಂದಿಗೆ ಬೇಟಿ ನೀಡಿ ಅಗತ್ಯ ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆಗಾಲ ಇನ್ನೂ ಇದ್ದು ಯಾವುದೇ ಸಮಯದಲ್ಲೂ ಸಮಸ್ಯೆಗಳಾಗಬಹುದು ಈಗಲೇ ಎಚ್ಚತ್ತು ಕೊಂಡರೆ ಮುಂದೆ ಆಗಬಹುದಾದಂತ ದುರಂತಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು. ಸಂಬಂಧ ಪಟ್ಟ ತಂಡವು ಇಲ್ಲೇ ಇದ್ದು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.