ಮಂಗಳೂರು, ಜು.30: ನಗರದಲ್ಲಿ ನಿನ್ನೆ(ಜು.29) ತಡರಾತ್ರಿ ಮಂಗಳಮುಖಿಯರು ಸಾರ್ವಜನಿಕರಿಗೆ ಕಿರಿಕಿರಿ ನೀಡಿದ್ದಾರೆಂದು ಆರೋಪ ಕೇಳಿಬಂದಿದ್ದು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು 10 ಕ್ಕೂ ಹೆಚ್ಚು ಮಂಗಳ ಮುಖಿಯರನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು Mangalore ಊರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ಮಂಗಳೂರು ನಗರದ ಆಸ್ಪತ್ರೆಯೊಂದರ ಬಳಿ ದಾರಿಯಲ್ಲಿ ಹೋಗುವವರ ಜೊತೆ ಅಸಭ್ಯ ವರ್ತನೆ ತೋರಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಇನ್ಸ್ಪೆಕ್ಟರ್ ಭಾರತಿಯವರ ಜೊತೆ ಮಂಗಳಮುಖಿಯರು ವಾಗ್ವಾದ ನಡೆಸಿದ್ದಾರೆ. ಘಟನೆ ಹಿನ್ನಲೆ ಇದೀಗ ಹತ್ತಕ್ಕೂ ಹೆಚ್ಚು ಮಂಗಳಮುಖಿಯರನ್ನು ವಶಕ್ಕೆ ಪಡೆದಿದ್ದು, ಸಾರ್ವಜನಿಕ ಶಾಂತಿ ಭಂಗದ ಅಡಿಯಲ್ಲಿ ಕೇಸು ದಾಖಲು ಮಾಡಲಾಗಿದೆ.