ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ಪತ್ತೆಯಾಗಿದೆ. ಆಫ್ರಿಕಾ ಮೂಲದ ವ್ಯಕ್ತಿಗೆ ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಗುಣಲಕ್ಷಣವಿರುವುದು ಧೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ಜುಲೈ 4ನೇ ರಂದು ಆಫ್ರಿಕಾದಿಂದ ಬೆಂಗಳೂರಿಗೆ ಕಿಡ್ನಿ ಕಸಿ ಮಾಡಿಸಿಕೊಳ್ಳಲು ಬಂದಿದ್ದ ಈತನಿಗೆ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳು ಕಂಡುಬಂದಿದೆ. ಬಳಿಕ ತಪಾಸಣೆ ನಡೆಸಿದಾಗ ಇದು ಮಂಕಿಪಾಕ್ಸ್ ಎಂದು ಧೃಢಪಟ್ಟಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಮಾಹಿತಿ ನೀಡಿದ್ದಾರೆ.
72 ಗಂಟೆಗಳಲ್ಲಿ 2 ಬಾರಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್ಐವಿ) ತಿಳಿಸಿದೆ. ಸೋಂಕಿತಣನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರನ್ನೂ ಪರೀಕ್ಷೆಸಲಾಗಿದೆ.