ಹಳಿಯಾಳ ಪಟ್ಟಣದ ಪುರಸಭೆಗೆ ಭೇಟಿ : ಗೃಹಲಕ್ಷ್ಮೀ ಕೇಂದ್ರದ ಕಾರ್ಯಚಟುವಟಿಕೆಗಳ ಪರಿಶೀಲನೆ

ಹಳಿಯಾಳ : ಪಟ್ಟಣದ ಪುರಸಭೆಯ ಕಾರ್ಯಾಲಯಕ್ಕೆ ಇಂದು ಸೋಮವಾರ ಬೆಳಿಗ್ಗೆ ಶಾಸಕರಾದ ಆರ್.ವಿ. ದೇಶಪಾಂಡೆ ಅವರು ಭೇಟಿ ನೀಡಿದರು.

ಈ‌ ಸಂದರ್ಭದಲ್ಲಿ ಪುರಸಭೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹಲಕ್ಷ್ಮಿ ಕೇಂದ್ರಕ್ಕೆ ತೆರಳಿ ಅಲ್ಲಿಯ ಸಿಬ್ಬಂದಿಗಳ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದರು. ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯ ಕುರಿತಂತೆ ಮಾಹಿತಿಯನ್ನು ಪಡೆದುಕೊಂಡರು. ಗ್ರಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಆಗಮಿಸಿದ್ದ ಫಲಾನುಭವಿಗಳ ಜೊತೆ ಯೋಜನೆಯ ಕುರಿತಂತೆ ಮಾತನಾಡಿದರು.

ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಅಶೋಕ್ ಸಾಳೆನ್ನವರ್, ಪುರಸಭೆಯ ನಿಕಟ ಪೂರ್ವ ಅಧ್ಯಕ್ಷ ಅಜರ್ ಬಸರಿಕಟ್ಟಿ, ನಿಕಟ ಪೂರ್ವ ಉಪಾಧ್ಯಕ್ಷೆ ಸುವರ್ಣಾ ಮಾದರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪಾಟೀಲ್, ಕೆಪಿಸಿಸಿ ಸದಸ್ಯ ಸುಭಾಷ್ ಕೋರ್ವೇಕರ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಶಂಕರ್ ಬೆಳಗಾಂಕರ್, ಯುವ ಕಾಂಗ್ರೆಸ್ ಅಧ್ಯಕ್ಷ ರವಿ ತೋರಣಗಟ್ಟಿ, ಪುರಸಭೆಯ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.