ಪ್ರವಾಹ ಸಂತ್ರಸ್ಥರಿಗೆ ಹಳಿಯಾಳದಲ್ಲಿ ಪರಿಹಾರದ ಆದೇಶ ಪತ್ರ ವಿತರಣೆ

ಹಳಿಯಾಳ :  ತಾಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಉಂಟಾಗುತ್ತಿರುವ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಇಂದು ಸೋಮವಾರ ಪಟ್ಟಣದ ತಾಲ್ಲೂಕು ಪಂಚಾಯ್ತು ಸಭಾಭವನದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರದ ಆದೇಶ ಪತ್ರವನ್ನು ಶಾಸಕರಾದ ಆರ್.ವಿ.ದೇಶಪಾಂಡೆಯವರು ವಿತರಿಸಿದರು.

ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ ತಾಲೂಕಿನ ಒಟ್ಟು 12 ಫಲಾನುಭವಿಗಳಿಗೆ ಪರಿಹಾರದ ಆದೇಶ ಪತ್ರವನ್ನು ವಿತರಿಸಲಾಯ್ತು.

ಆನಂತರ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆರ್.ವಿ.ದೇಶಪಾಂಡೆಯವರು, ಮಳೆಯ ಅನಾಹುತಗಳ ನಿರ್ವಹಣೆಗೆ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕೆಂದು ಸೂಚನೆ‌ ನೀಡಿದರು.

ಸಭೆಯಲ್ಲಿ ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ, ತಹಶೀಲ್ದಾರ್ ಲೋಕೇಶ್, ತಾಲೂಕ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಪರಶುರಾಮ ಘಸ್ತೆ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.