ದಾಂಡೇಲಿ: ಮಣಿಪುರ ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ದಾಂಡೇಲಿ ತಾಲ್ಲೂಕು ಮಹಿಳಾ ಘಟಕದ ವತಿಯಿಂದ ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಜೆ.ಎನ್.ರಸ್ತೆಯಲ್ಲಿ ಪ್ರತಿಭಟನೆಯನ್ನು ನಡೆಸಲಾಯ್ತು.
ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷೆ ಮುಜಿಬಾ ಛಬ್ಬಿಯವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಬಳಿಕ ಈ ಕೃತ್ಯ ಮೆರೆದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬರೆದ ಮನವಿಯನ್ನು ರಾಜ್ಯಪಾಲರಿಗೆ ಕಳುಹಿಸಿಕೊಡಲಾಯ್ತು. ಈ ಸಂದರ್ಭದಲ್ಲಿ ದಾಂಡೇಲಿ ತಾಲ್ಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್, ಪ್ರಮುಖರುಗಳಾದ ರಾಘವೇಂದ್ರ ಗಡೆಪ್ಪನವರ, ಅಶೋಕ್ ಪಾಟೀಲ್, ಫಿರೋಜ್ ಪಿರ್ಜಾದೆ, ರವಿ ಚೌವ್ಹಾಣ್, ನೀಲಾ ಮಾದರ, ಆಯಿಷಾ ಮುಕಾಶಿ, ಮಂಜುಳಾ ಮೊದಲಾದವರು ಹಾಗೂ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.