ಇಂದಿನಿಂದ ಎರಡು ದಿನಗಳವರೆಗೆ ದಾಂಡೇಲಿಯ ಮುಖ್ಯ ಅಂಚೆ ಕಚೇರಿಯಲ್ಲಿ ಆಧಾರ್ ಜೋಡಣೆ ಕಾರ್ಯಾಗಾರ

ದಾಂಡೇಲಿ : ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆಯನ್ನು ಹೊಂದಿರುವ ಸಾಮಾಜಿಕ ಭದ್ರತಾ ಪಿಂಚಣಿಗಳಾದ ವೃದ್ಧಾಪ್ಯವೇತನ, ವಿಶೇಷ ಚೇತನರ ಪಿಂಚಣಿ, ವಿಧವಾ ಪಿಂಚಣಿ ಪಡೆಯುವ ದಾಂಡೇಲಿ ನಗರ ಹಾಗೂ ಗ್ರಾಮೀಣ ಪ್ರದೇಶದ ಫಲಾನುಭವಿಗಳು ಪಿಂಚಣಿ ಪಡೆಯಲು ಉಳಿತಾಯ ಖಾತೆಗೆ ಆಧಾರ್ ಜೋಡಣೆ ಕಡ್ಡಾಯವಾಗಿ ಮಾಡಬೇಕಾದ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳವರೆಗೆ ಅಂಚೆ ಉಳಿತಾಯ ಖಾತೆಗೆ ಆಧಾರ್ ಜೋಡಣೆ ಮಾಡುವ ಕಾರ್ಯಾಗಾರವನ್ನು ದಾಂಡೇಲಿಯ ಮುಖ್ಯ ಅಂಚೆ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆಯೆಂದು ದಾಂಡೇಲಿ ಅಂಚೆ ಉಪ ವಿಭಾಗದ ಅಂಚೆ ನಿರೀಕ್ಷಕರಾದ ಶಿವಾನಂದ ದೊಡ್ಡಮನಿಯವರು ತಿಳಿಸಿದ್ದಾರೆ.

ಅವರು ಇಂದು ಮಂಗಳವಾರ ನಗರದ ಮುಖ್ಯ ಅಂಚೆ ಕಚೇರಿಯಲ್ಲಿ ಮಾಧ್ಯಮಕ್ಕೆ ಈ ವಿಷಯವನ್ನು ಹೇಳಿದರು. ಪಿಂಚಣಿ ಪಡೆಯುವ ಫಲಾನುಭವಿಗಳು ಈ ಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಶಿವಾನಂದ ದೊಡ್ಡಮನಿಯವರು ವಿನಂತಿಸಿದ್ದಾರೆ.