ಯಲ್ಲಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆಡಳಿತ ಹಾಗೂ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಆಶ್ರಯದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಪ್ರಯುಕ್ತ ವ್ಯಸನ ಮುಕ್ತ ದಿನ ಆಚರಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ ಮಾತನಾಡಿ, ಯುವಕರು ವ್ಯಸನಿಗಳಾಗುತ್ತಿರುವುದು ಆತಂಕದ ವಿಷಯ. ಯುವಕರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಂಡು, ಸಮಾಜಕ್ಕೆ ಕಂಟಕರಾಗಿದ್ದಾರೆ. ಚಟಗಳಿಂದ ದೂರವಾಗಿ ಆರೋಗ್ಯಪೂರ್ಣ ಜೀವನ ನಡೆಸಬೇಕೆಂದರು.
ಉಪನ್ಯಾಸಕ ಡಿ. ಜಿ. ತಾಪಸ್, ಡಾ. ಮಹಾಂತ ಶಿವಯೋಗಿಗಳ ಕುರಿತು ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಿ. ಎಸ್. ಭಟ್ಟ ಮಾತನಾಡಿದರು. ಗ್ರೇಡ್-2 ತಹಸೀಲ್ದಾರರ ಸಿ. ಜಿ. ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಸಹಾಯಕ ನಿರ್ದೇಶಕ ಮಂಜುನಾಥ ಆಗೇರ, ಪ.ಪಂ ಮುಖ್ಯಾಧಿಕಾರಿ ಸುನೀಲ ಗಾವಡೆ, ಲಿಂಗಾಯತ ಸಮುದಾಯದ ಮುಖಂಡ ಮಹೇಶ ಗೌಳಿ, ಉಪನ್ಯಾಸಕ ಜನಾರ್ದನ.ಆರ್.ಡಿ, ವ್ಯವಸ್ಥಾಪಕ ಎನ್.ಬಿ.ಮೆಣಸುಮನೆ ಇತರರಿದ್ದರು. ನಮೃತಾ ಹೆಬ್ಬಾರ್, ಆಶಾ ಬೆಳ್ಳೆನವರ, ಸಹನಾ ನಾಯ್ಕ, ಯುವ ರೆಡ್‌ಕ್ರಾಸ್ ಸಂಚಾಲಕ ಶರತ್‌ಕುಮಾರ್, ಪ್ರಾಧ್ಯಾಪಕ ರಾಮಕೃಷ್ಣ ಗೌಡ ನಿರ್ವಹಿಸಿದರು