ದಾಂಡೇಲಿ: ಮಣಿಪುರ ರಾಜ್ಯದಲ್ಲಿ ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿರುವುದು ಅತ್ಯಂತ ಖಂಡನೀಯ. ಇಂತಹ ಘನಘೋರ ಹೇಯ ಕೃತ್ಯವನ್ನು ನಡೆಸಿದ ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರ) ಬಣದ ಮಹಿಳಾ ಘಟಕದ ವತಿಯಿಂದ ಪ್ರಧಾನ ಮಂತ್ರಿಯವರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಕಚೇರಿಯ ಮುಕುಂದ್ ಬಸವ ಅವರ ಮೂಲಕ ಬುಧವಾರ ನೀಡಲಾಯ್ತು.
ರಾಜ್ಯಪಾಲರಿಗೆ ಬರೆದ ಮನವಿಯಲ್ಲಿ ಮಣಿಪುರದಲ್ಲಿ ಇತ್ತಿಚೀಗೆ ಜನಾಂಗಿಯ ಗಲಭೆಯಲ್ಲಿ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿದ್ದ ಗಲಭೆಕೊರರ ಗುಂಪು ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿತ್ತಲ್ಲದೇ, ಓರ್ವ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅಟ್ಟಹಾಸ ಮರೆದಿದ್ದಾರೆ. ಈ ಹೇಯ ಕೃತ್ಯದಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ, ನೀಚ ಕೃತ್ಯ ಎಸಗಿರುವ ಎಲ್ಲಾ ಆರೋಪಿಗಳನ್ನು ಬಂಧಿಸಿ, ಕಠಿಣ ಕಾನೂನು ಕ್ರಮ ಜರುಗಿಸಿಬೇಕೆಂದು ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರುಗಳಾದ ಕವಿತಾ ಗಡೆಪ್ಪನವರ್, ಸರಸ್ವತಿ ಬಳಗಾರ, ರೇಷ್ಮಾ ಶೆಟ್ಟಿ, ಉಜ್ವಲ ಗೌಡ, ಭಾರ್ಗವಿ ನಾಯ್ಕರ್, ಆರತಿ ಹಾಗೂ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು