ದಾಂಡೇಲಿ : ಮಣಿಪುರ ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿ ಮಣಿಪುರದ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ನಗರದ ಕ್ರಿಶ್ಚಿಯನ್ ಕ್ಯಾಥೋಲಿಕ್ ಸಂಘದ ವತಿಯಿಂದ ಪ್ರಧಾನಮಂತ್ರಿಯವರಿಗೆ ಬರೆದ ಮನವಿಯನ್ನು ಇಂದು ಬುಧವಾರ ಸಂಜೆ ನಾಲ್ಕು ಗಂಟೆಗೆ ನಗರದಲ್ಲಿರುವ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಹಶೀಲ್ದಾರರ ಅನುಪಸ್ಥಿತಿಯಲ್ಲಿ ಆಹಾರ ನಿರೀಕ್ಷಕರಾದ ಗೋಪಿ ಚೌಹ್ವಾಣ್ ಅವರ ಮೂಲಕ ನೀಡಲಾಯ್ತು.
ಈ ಸಂದರ್ಭದಲ್ಲಿ ನಗರದ ಕ್ರಿಶ್ಚಿಯನ್ ಕ್ಯಾಥೋಲಿಕ್ ಸಂಘದ ಅಧ್ಯಕ್ಷರಾದ ಸಂತೋಷ್.ಎಲ್.ಪಿಂಟೊ ಹಾಗೂ ಸಂಘದ ಪದಾಧಿಕಾರಿಗಳಾದ ಜಾರ್ಜ್ ಫರ್ನಾಂಡಿಸ್, ಪೌಲ್ ಫರ್ನಾಂಡಿಸ್, ಜೇಮ್ಸ್ ಜಾನ್ಸನ್, ಮಾರ್ಷಲ್ , ಶಾಮ್ , ಜಾಸ್ಮಿನ್ ಮೊದಲಾದವರು ಉಪಸ್ಥಿತರಿದ್ದರು.