ನಂದೊಳ್ಳಿ ಗ್ರಾ.ಪಂ ಸಭಾಭವನದಲ್ಲಿಎಲೆ ಚುಕ್ಕೆ ರೋಗ ನಿಯಂತ್ರಣ ಕುರಿತು ಮಾಹಿತಿ ಕಾರ್ಯಾಗಾರ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಗ್ರಾ.ಪಂ ಸಭಾಭವನದಲ್ಲಿ ಎಲ್.ಎಸ್.ಎಂ.ಪಿ ಸೊಸೈಟಿ ಹಾಗೂ ತೋಟಗಾರಿಕಾ ಇಲಾಖೆ ಆಶ್ರಯದಲ್ಲಿ ಎಲೆ ಚುಕ್ಕೆ ರೋಗ ನಿಯಂತ್ರಣ ಕುರಿತು ಮಾಹಿತಿ ಕಾರ್ಯಾಗಾರ ಗುರುವಾರ ನಡೆಯಿತು.
ತೋಟಗಾರಿಕಾ ಇಲಾಖೆಯ ಅಧಿಕಾರಿ ಸುಭಾಸ ಹೆಗಡೆ, ತಜ್ಞ ವಿಜಯೇಂದ್ರ ಹೆಗಡೆ ಎಲೆ ಚುಕ್ಕೆ ರೋಗದ ನಿಯಂತ್ರಣದ ಕುರಿತು ಮಾಹಿತಿ ನೀಡಿದರು. ರೈತರೊಂದಿಗೆ ಸಂವಾದ ನಡೆಸಿದರು.
ಎಲ್.ಎಸ್.ಎಂ.ಪಿ ಸೊಸೈಟಿ ಅಧ್ಯಕ್ಷ ನಾಗರಾಜ ಕವಡಿಕೆರೆ, ಉಪಾಧ್ಯಕ್ಷ ಟಿ.ಆರ್.ಹೆಗಡೆ ನಿರ್ದೇಶಕರಾದ ತಿಮ್ಮಣ್ಣ ಘಟ್ಟಿ, ಗಾಬ್ರಿಯಲ್ ಫರ್ನಾಂಡೀಸ್, ಟಿಎಂಎಸ್ ನಿರ್ದೇಶಕ ವೆಂಕಟರಮಣ ಭಟ್ಟ ಕಿರಕುಂಭತ್ತಿ, ಪ್ರಮುಖರಾದ ಪರಮೇಶ್ವರ ಕೊಂಬೆ, ರಾಮಕೃಷ್ಣ ಕವಡಿಕೆರೆ ಇತರರಿದ್ದರು.