ಹಳಿಯಾಳ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್.ವಿ.ದೇಶಪಾಂಡೆಯವರು ಇಂದು ಗುರುವಾರ ನವದೆಹಲಿಯಲ್ಲಿ ಭೇಟಿಯಾಗಿ ಜನ್ಮದಿನದ ಶುಭಾಶಯವನ್ನು ಕೋರಿದರು.
ಈ ಸಂದರ್ಭದಲ್ಲಿ ಆರ್.ವಿ.ದೇಶಪಾಂಡೆಯವರ ಜೊತೆ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಮತ್ತು ಪ್ರಕಾಶ ಹುಕ್ಕೇರಿ ಸೇರಿದಂತೆ ಮೊದಲಾದ ನಾಯಕರು ಉಪಸ್ಥಿತರಿದ್ದರು.