ದಾಂಡೇಲಿ : ನಗರದಲ್ಲಿ ಸಿಟಿ ಬಸ್ಸುಗಳು ಸಂಚರಿಸುತ್ತಿವೆ. ಆದರೆ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರ ಸಂಖ್ಯೆ ಅಧಿಕವಿರುವುದರಿಂದ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಸಿಟಿ ಬಸ್ಸುಗಳು ಇಲ್ಲವಾದ್ದರಿಂದ ವಿದ್ಯಾರ್ಥಿಗಳು ಬಸ್ಸಿನ ಮೆಟ್ಟಿಲಲ್ಲಿ ಜೀವ ಕೈಯಲ್ಲಿ ಹಿಡಿದು ನೇತಾಡಿಕೊಂಡು ಪ್ರಯಾಣಿಸಬೇಕಾದ ಸ್ಥಿತಿ ದಾಂಡೇಲಿಯಲ್ಲಿ ನಿರ್ಮಾಣವಾಗಿದೆ.
ಅಪಾಯ, ಅನಾಹುತ, ಅವಘಡ ಸಂಭವಿಸುವ ಮುನ್ನ ಸಾರಿಗೆ ಘಟಕ ಈ ಬಗ್ಗೆ ಎಚ್ಚೆತ್ತು ಸುಗಮ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಬೇಕಾಗಿದೆ.