ದಾಂಡೇಲಿ : ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಆ:05 ರಂದು ವಿದ್ಯುಕ್ತ ಚಾಲನೆ ಸಿಗಲಿದ್ದು, ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೆಸ್ಕಾಂ ಶಿರಸಿ ವೃತ್ತದಲ್ಲಿ ಉದ್ದೇಶಿಸಿದ ಗೃಹ ಜ್ಯೋತಿ ಯೋಜನೆಯ ಅನುಷ್ಟಾನದ ಕಾರ್ಯಕ್ರಮವನ್ನು ಆ:05 ರಂದು ಕಾರವಾರದ ಕಾಜುಬಾಗದಲ್ಲಿರುವ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಹೆಸ್ಕಾಂ ದಾಂಡೇಲಿ ವಿಭಾಗದ ಸಾರ್ವಜನಿಕರು ಭಾಗವಹಿಸುವಂತೆ ಹೆಸ್ಕಾಂ ದಾಂಡೇಲಿ ವಿಭಾಹದ ಕಾರ್ಯನಿರ್ವಾಹಕ ಅಭಿಯಂತರರಾದ ಪುರುಷೋತ್ತಮ ಮಲ್ಯ ಅವರು ತಿಳಿಸಿದ್ದಾರೆ.
ಅವರು ಗುರುವಾರ ನಗರದಲ್ಲಿರುವ ಹೆಸ್ಕಾಂ ಕಾರ್ಯಾಲಯದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ತಿಳಿಸಿದರು.