ಬಾಂಗ್ಲಾದೇಶ ಏಕದಿನ ತಂಡದ ನಾಯಕ ತಮೀಮ್ ಇಕ್ಬಾಲ್ ಮತ್ತೊಮ್ಮೆ ತಮ್ಮ ನಿರ್ಧಾರದಿಂದ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಕಳೆದ ತಿಂಗಳು ಇದ್ದಕ್ಕಿದ್ದಂತೆ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನು ಆಶ್ಚರ್ಯಗೊಳಿಸಿದ್ದ ತಮೀಮ್, ಒಂದು ದಿನದ ನಂತರ ನಿವೃತ್ತಿಯ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದರು.
ಇದೀಗ ಗುರುವಾರ ದಿಢೀರ್ ಪ್ರಕಟಣೆ ಹೊರಡಿಸಿರುವ ತಮೀಮ್, ಬಾಂಗ್ಲಾದೇಶದ ಏಕದಿನ ತಂಡದ ನಾಯಕತ್ವವನ್ನು ತ್ಯಜಿಸಿದ್ದಾರೆ. ಅಷ್ಟೇ ಅಲ್ಲದೆ ಏಷ್ಯಾಕಪ್ನಿಂದಲೂ ಹೊರಗುಳಿದಿದ್ದಾರೆ. ತಮೀಮ್ ಬೆನ್ನುನೋವಿನಿಂದ ಬಳಲುತ್ತಿದ್ದು, ವಿಶ್ವಕಪ್‌ಗೂ ಮುನ್ನ ಬಾಂಗ್ಲಾದೇಶಕ್ಕೆ ಇದು ದೊಡ್ಡ ಹೊಡೆತವಾಗಿದೆ.
ತಮೀಮ್ ಈಗ ನ್ಯೂಜಿಲೆಂಡ್ ವಿರುದ್ಧ ಸ್ವದೇಶಿ ಏಕದಿನ ಸರಣಿಯನ್ನು ಆಡಲು ತಯಾರಿ ನಡೆಸುತ್ತಿದ್ದಾರೆ. ಇದು ಏಷ್ಯಾಕಪ್ ಮತ್ತು ವಿಶ್ವಕಪ್ ನಡುವೆ ಸೆಪ್ಟೆಂಬರ್ 21 ರಿಂದ ಪ್ರಾರಂಭವಾಗಲಿದೆ. ಕಳೆದ ತಿಂಗಳ ಜುಲೈ 6 ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದ ಅವರು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ಮನವಿಯ ನಂತರ ನಿವೃತ್ತಿಯ ನಿರ್ಧಾರವನ್ನು ಬದಲಿಸಿ ಬಾಂಗ್ಲಾದೇಶದ ಪರವಾಗಿ ಆಡಲು ನಿರ್ಧರಿಸಿದ್ದರು.
ತಮ್ಮ ನಿರ್ಧಾರದ ಕುರಿತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧ್ಯಕ್ಷ ನಜ್ಮುಲ್ ಹಸನ್ ಅವರೊಂದಿಗೆ ತಮೀಮ್ ಸುದೀರ್ಘ ಮಾತುಕತೆ ನಡೆಸಿದ್ದು ಈ ಬಗ್ಗೆ ಪ್ರಧಾನಿಯವರಿಗೂ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಗಾಯದ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರಕ್ಕೆ ಬಂದಿರುವುದಾಗಿ ತಮೀಮ್ ತಿಳಿಸಿದ್ದಾರೆ.