ಭಾಷಾ ಸಾಹಿತ್ಯದಲ್ಲಿ ಅನುವಾದ ಕೌಶಲ್ಯತೆ ಎಂಬ ವಿಷಯದ ಮೇಲೆ ‘ಒಂದು ದಿನದ ಕಾರ್ಯಾಗಾರ’

ದಾಂಡೇಲಿ : ಬಂಗೂರನಗರ ಪದವಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಐಕ್ಯೂಎಸಿ, ಕನ್ನಡ ಸಂಘ, ಕನ್ನಡ, ಹಿಂದಿ, ಇಂಗ್ಲೀಷ್ ವಿಭಾಗಗಳ ಸಹಯೋಗದೊಂದಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಭಾಷಾ ಸಾಹಿತ್ಯದಲ್ಲಿ ಅನುವಾದ ಕೌಶಲ್ಯತೆ ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರವನ್ನು ಹಿರಿಯ ಸಾಹಿತಿಗಳಾದ ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿಯವರು ಉದ್ಘಾಟಿಸಿ ಮಾತನಾಡುತ್ತಾ, ಭಾಷಾ ಸಾಹಿತ್ಯದಲ್ಲಿ ಅನುವಾದದ ಕೌಶಲ್ಯತೆ ಈಗಿನ ಕಾಲಘಟ್ಟದ ವಿದ್ಯಾರ್ಥಿಗಳಿಗೆ ಅತೀ ಅವಶ್ಯವಾಗಿ ಬೇಕಾಗಿದೆ. ಅನುವಾದವೂ ಸಹ ಒಂದು ವಿಭಿನ್ನ ರೀತಿಯ ಕೌಶಲ್ಯವಾಗಿದೆ. ಈ ನಿಟ್ಟಿನಲ್ಲಿ ಈ ಶಿಬಿರ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿಯನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿಯಾಗಲೆಂದರು.

ಮುಖ್ಯ ಅತಿಥಿಗಳಾಗಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕರಾದ ರಾಘವೇಂದ್ರ, ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ತಿವಾರಿ ಅವರು ಭಾಗವಹಿಸಿ ಕಾರ್ಯಾಗಾರಕ್ಕೆ ಶುಭ ಕೋರಿ ಮಾತನಾಡಿದರು.

ಕಾರ್ಯಾಗಾರದಲ್ಲಿ ಹಿರಿಯ ಸಾಹಿತಿ ಧಾರವಾಡದ ಡಾ.ಹೇಮಾ ಪಟ್ಟಣಶೆಟ್ಟಿ, ಜೆವಿಡಿ ಪಿಯು ಕಾಲೇಜಿನ ಉಪನ್ಯಾಸಕರಾದ ಜಿ.ಎಸ್.ಹೆಗಡೆ, ಹಿರಿಯ ಸಾಹಿತಿ ಧಾರವಾಡದ ಲೀಲಾ ಕಲಕೋಟಿ ಹಳಿಯಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಚಂದ್ರಶೇಖರ ಲಮಾಣಿ, ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಎಮ್.ಎಚ್.ಹಂಚಿನಾಳ ಬಂಗೂರನಗರ ಪದವಿ ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಡಾ.ಬಿ.ಎಲ್.ಗುಂಡೂರ, ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾದ್ಯಾಪಕ ಡಾ.ಜಿ.ಕೆ.ಬಡಿಗೇರ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ.ನಿಶಾಂತ್ ಶರಿಫ್, ಬಂಗೂರನಗರ ಪದವಿ ಮಹಾವಿದ್ಯಾಲಯದ ಡಾ..ಅನಿತಾ ನಾಯರ್, ಡಾ. ತೃಪ್ತಿ ನಾಯಕ, ವನಮಾಲಾ ಪೀಸೆ, ಹೀನಾ ಖಾನ್, ಸುಫಿಯಾ ಜಮಾಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.