ರಾಹುಲ್ ಗಾಂಧಿಯವರ ಸಂಸದ ಸ್ಥಾನ ಅನರ್ಹ ತೀರ್ಪಿಗೆ ಸರ್ವೋಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ: ದಾಂಡೇಲಿ ಬ್ಲಾಕ್ ಕಾಂಗ್ರೆಸಿನಿಂದ ಸಂಭ್ರಮಾಚರಣೆ.

ದಾಂಡೇಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂಸದ ಸ್ಥಾನವನ್ನು ಗುಜಾರಾತ್ ಉಚ್ಚ ನ್ಯಾಯಾಲಯವು ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ಮೇಲ್ಮನವಿಗೆ ಸರ್ವೋಚ್ಚ ನ್ಯಾಯಾಲಯವು ಸಂಸದ ಸ್ಥಾನದ ಅನರ್ಹ ತೀರ್ಪಿಗೆೆ ತಡೆಯಾಜ್ಷೆ ನೀಡಿರುವುದಕ್ಕೆ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ನಗರದ ಸೋಮಾನಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಯನ್ನು ಆಚರಿಸಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯವರಾದ ಮೋಹನ ಹಲವಾಯಿ, ಎಸ್.ಎಸ್.ಪೂಜಾರ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಕಾರ್ಯದರ್ಶಿ ದಾದಾಪೀರ್ ನದೀಮುಲ್ಲಾ, ಮಾಜಿ ನಗರ ಸಭಾ ಸದಸ್ಯ ಕೀರ್ತಿ ಗಾಂವಕರ್ ಮೊದಲಾದವರು ಮಾತನಾಡಿ ದೇಶದ ಸರ್ವೋಚ್ಚ ನ್ಯಾಯಾಲಯವು ರಾಹುಲ್ ಗಾಂಧಿಯವರ ಮೇಲ್ಮನವಿಯನ್ನು ಪುರಸ್ಕರಿಸಿ ಬಿಗ್ ರಿಲಿಫ್ ನೀಡಿರುವುದು ಸ್ವಾಗತಾರ್ಹ. ನಮಗೆ ಸರ್ವೋಚ್ಚ ನ್ಯಾಯಾಲಯದ ಮೇಲೆ ಬಲವಾದ ನಂಬಿಕೆಯಿದ್ದು, ಬರಲಿರುವ ದಿನಗಳಲ್ಲಿ ರಾಹುಲ್ ಗಾಂಧಿಯವರ ಸತ್ಯದ ಪರವಾಗಿ ತೀರ್ಪು ಹೊರಬೀಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ನಾಯ್ಕರ್, ನಗರ ಸಭಾ ಸದಸ್ಯರುಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.