ಟೀಂ ಇಂಡಿಯಾದ ಟಿ20 ನಾಯಕನಾಗಿ ಕಳೆದ ವರ್ಷದಿಂದ ರಾಷ್ಟ್ರೀಯ ತಂಡಕ್ಕೆ ರೀ ಎಂಟ್ರಿ ಕೊಟ್ಟಿದ್ದ ಹಾರ್ದಿಕ್ ಪಾಂಡ್ಯ, ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಅವರ ದಾಖಲೆಯನ್ನು ಮುರಿಯುವ ಹೊಸ್ತಿಲಿನಲ್ಲಿದ್ದಾರೆ.ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್‌ಗಳ ಪೈಕಿ ಇದೀಗ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಅವರನ್ನು ಮೀರಿಸುವ ಅವಕಾಶವನ್ನು ಹೊಂದಿದ್ದಾರೆ.ಜಸ್ಪ್ರೀತ್ ಬುಮ್ರಾ ಇದುವರೆಗೆ ಟೀಂ ಇಂಡಿಯಾ ಪರ 60 ಟಿ20 ಪಂದ್ಯಗಳಲ್ಲಿ 70 ವಿಕೆಟ್ ಪಡೆದಿದ್ದಾರೆ. ಮತ್ತೊಂದೆಡೆ, ಹಾರ್ದಿಕ್ ಪಾಂಡ್ಯ ಇದುವರೆಗೆ 77 ಟಿ20 ಪಂದ್ಯಗಳಲ್ಲಿ 70 ವಿಕೆಟ್ ಪಡೆದಿದ್ದಾರೆ.ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಪಾಂಡ್ಯ 1 ವಿಕೆಟ್ ಪಡೆದರೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್‌ಗಳ ಪೈಕಿ ಬುಮ್ರಾ ಅವರನ್ನು ಹಿಂದಿಕ್ಕಲಿದ್ದಾರೆ.ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 76 ಟಿ20 ಪಂದ್ಯಗಳಲ್ಲಿ 93 ವಿಕೆಟ್‌ಗಳನ್ನು ಪಡೆದಿರುವ ಯುಜುವೇಂದ್ರ ಚಹಾಲ್ ಅಗ್ರಸ್ಥಾನದಲ್ಲಿದ್ದಾರೆದ್ದಾರೆ.ಇನ್ನು ವೇಗಿ ಭುವನೇಶ್ವರ್ ಕುಮಾರ್ 87 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 90 ವಿಕೆಟ್ ಪಡೆದು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.ಭಾರತದ ಹಿರಿಯ ಸ್ಟಾರ್ ಬೌಲರ್ ರವಿಚಂದ್ರನ್ ಅಶ್ವಿನ್ 65 ಟಿ20 ಪಂದ್ಯಗಳಲ್ಲಿ 72 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.ಸದ್ಯ 70 ವಿಕೆಟ್ ಪಡೆದಿರುವ ಬುಮ್ರಾ ನಾಲ್ಕನೇ ಸ್ಥಾನದಲ್ಲಿದ್ದು, ಹಾರ್ದಿಕ್ ಪಾಂಡ್ಯ ಕೂಡ ಅದೇ ಸಂಖ್ಯೆಯ ವಿಕೆಟ್ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.