ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ ಗುರುವಾರದಿಂದ ಪ್ರಾರಂಭವಾಗಿದ್ದು, ಭಾರತ ಪದಕ ಬೇಟೆ ಮುಂದುವರೆಸಿದೆ. ಶನಿವಾರ ನಡೆದ ವೇಟ್‌ಲಿಫ್ಟಿಂಗ್‌ನಲ್ಲಿ ಚಿನ್ನ ಸೇರಿದಂತೆ ಮೂರು ಪದಕಗಳನ್ನು ಮುಡಿಗೇರಿಸಿಕೊಂಡಿದೆ.
ವೇಟ್‌ಲಿಫ್ಟರ್ ಮೀರಾಬಾಯಿ ಚಾನು ವೇಟ್‌ಲಿಫ್ಟಿಂಗ್‌ನ 49 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಕಾಮನ್‌ವೆಲ್ತ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟಿದ್ದಾರೆ.
ವೇಟ್‌ಲಿಫ್ಟರ್ ಸಂಕೇತ್ ಸಾಗರ್ ಅವರು 55 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ, 61 ಕೆಜಿ ವಿಭಾಗದ ವೇಯ್ಟ್ ಲಿಫ್ಟಿಂಗ್‌ನಲ್ಲಿ ಕನ್ನಡಿಗ ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಈ ಬಾರಿಯ ಕಾಮನ್‌ವೆಲ್ತ್ ಪದಕ ಪಟ್ಟಿಯಲ್ಲಿ ಭಾರತ 9ನೇ ಸ್ಥಾನದಲ್ಲಿದೆ.