ಐ.ಎಸ್.ಐ ಸಂಪರ್ಕ ಹೊಂದಿದ್ದ ಭಟ್ಕಳ ಮೂಲದ ವ್ಯಕ್ತಿ ಎನ್.ಐ.ಎ ವಶಕ್ಕೆ.!

ಭಟ್ಕಳ : ಐ.ಎಸ್.ಐ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆ ಎನ್.ಐ.ಎ ತಂಡ ಭಟ್ಕಳ ಮೂಲದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ತನಿಖಾ ತಂಡ ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಭಟ್ಕಳ ಮೂಲದ 30 ವರ್ಷದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ಐ.ಎಸ್.ಐ.ಎಸ್ ಬರಹಗಳನ್ನು ಭಾಷಾಂತರ ಮಾಡುತ್ತಿದ್ದ ಎಂಬ ಶಂಕೆಯ ಮೇಲೆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಆತನನ್ನು ಗುಪ್ತ ಸ್ಥಳಕ್ಕೆ ಕರೆದುಕೊಂಡು ಹೋಗಿ ತನಿಖೆ ಮಾಡುತ್ತಿರುವ ಬಗ್ಗೆ ಮಾಹಿತಿ ದೊರಕಿದೆ.