ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಹರೀಶ್ ನಾಯ್ಕ ನಿಧನಕ್ಕೆ ಕಂಬನಿ ಮಿಡಿದ ಮಾಜಿ ಶಾಸಕರಾದ ಸುನೀಲ್ ಹೆಗಡೆ

ಹಳಿಯಾಳ : ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷರಾದ ಹರೀಶ್ ನಾಯ್ಕ ಅವರ ನಿಧನಕ್ಕೆ ಮಾಜಿ ಶಾಸಕರಾದ ಸುನೀಲ್ ಹೆಗಡೆಯವರು ಕಂಬನಿ ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ. ಅವರು ಇಂದು ಹಳಿಯಾಳ ಪಟ್ಟಣದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ಹರೀಶ್ ನಾಯ್ಕ ಅವರ ಅಗಲಿಕೆ ಕ್ಷೇತ್ರಕ್ಕೆ ಮಾತ್ರವಲ್ಲದೇ ಜಿಲ್ಲೆಗೆ ಹಾಗೂ ರಾಜ್ಯದ ಕಾರ್ಮಿಕ ವಲಯಕ್ಕೆ ತುಂಬಲಾರದ ನಷ್ಟ ತಂದಿದೆ ಎಂದು ಮೃತರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ