ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ರಾಜೇಶ್ ತಿವಾರಿಯವರಿಗೆ ಸನ್ಮಾನ

ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ತಿವಾರಿಯವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದಾಂಡೇಲಿಯ ಸಾಹಿತ್ಯ ಭವನದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಾಹಿತ್ಯ ಭವನಕ್ಕೆ ಅಗತ್ಯ ಬೇಕಾದ ಮೂಲಸೌಕರ್ಯಗಳನ್ನು ಒದಗಿಸಿರುವುದು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಮತ್ತು ಕಾರ್ಯ ಚಟುವಟಿಕೆಗಳಿಗೆ ವಿಶೇಷ ನೆರವು ನೀಡುತ್ತಾ ಬಂದಿರುವ ಹಿನ್ನಲೆಯಲ್ಲಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಪರವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ತಿವಾರಿಯವರನ್ನು ಕಸಾಪ ಜಿಲ್ಲಾಧ್ಯಕ್ಷರಾದ ಬಿ.ಎನ್.ವಾಸರೆಯವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳು ಹಾಗೂ ಆಜೀವ ಸದಸ್ಯರು ಉಪಸ್ಥಿತರಿದ್ದರು.