ಹಳಿಯಾಳ : ಪಟ್ಟಣದ ಮರಾಠಾ ಭವನದಲ್ಲಿ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ತಿನ ಜಿಲ್ಲಾಮಟ್ಟದ ಕಾರ್ಯಕಾರಿಣಿ ಸಭೆಯು ಜರುಗಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಪ್ರಕಾಶ ಪಾಕ್ರೆಯವರು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ತಿನ ಘಟಕಗಳನ್ನು ಬಲವರ್ಧನಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ತಿಳಿಸಿದರು. ಸಮಾಜ ಬಾಂಧವರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪರಿಷತ್ತಿನ ತಾಲೂಕು ಘಟಕಗಳು ವಿಶೇಷ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ಜೋಯಿಡಾ, ಮುಂಡಗೋಡ, ದಾಂಡೇಲಿ, ಯಲ್ಲಾಪುರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ತಿನ ತಾಲೂಕು ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.