ಹಳಿಯಾಳ ತಾಲ್ಲೂಕಿನ ಚಿಬ್ಬಲಗೇರಿಯಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಹಳಿಯಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಹಳಿಯಾಳ ತಾಲ್ಲೂಕಿನ ಚಿಬ್ಬಲಗೇರಿಯಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮಕ್ಕೆ ಇಂದು ಚಾಲನೆಯನ್ನು ನೀಡಲಾಯಿತು.

ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪರಶುರಾಮ್ ಗಸ್ತೆ ಅವರು ಪೋಷಕರು ಮಕ್ಕಳ ವಯಸ್ಸಿಗೆ ಅನುಗುಣವಾಗಿ ಎಲ್ಲ ಲಸಿಕೆಗಳನ್ನು ತಪ್ಪದೆ ಹಾಕಿಸಿ, ಅವರನ್ನು ಬರಬಹುದಾದ ರೋಗಗಳಿಂದ ರಕ್ಷಣೆ ಮಾಡಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಹೇಳಿದರು.

ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ ಅವರು ಮಾತನಾಡಿ ಎಲ್ಲ ಸರ್ಕಾರಿ ಆರೋಗ್ಯ ಕೇಂದ್ರ, ಉಪ ಕೇಂದ್ರ ಹಾಗೂ ಅಂಗನವಾಡಿಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದರಲ್ಲದೇ, ಆಗಸ್ಟ್ 7 ರಿಂದ 12 ರವರೆಗೆ ಐದು ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿಯರಿಗೆ ಲಸಿಕೆ ನೀಡಲಾಗುವುದು. ದಡಾರ ರುಬೆಲ್ಲಾ ನಿರ್ಮೂಲನೆಯತ್ತ ದೊಡ್ಡ ಹೆಜ್ಜೆ ಇಡಲಾಗಿದೆ. ಒಟ್ಟಾರೆ ಮಕ್ಕಳನ್ನು ಬಾಧಿಸುವ 12 ರೋಗ ನಿಯಂತ್ರಣಕ್ಕೆ ಪೂರಕವಾಗಿ ಲಸಿಕೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಜೊತೆಗೆ ವಿದ್ಯಾವಂತ ಸಮುದಾಯವು ಗ್ರಾಮೀಣ ಪ್ರದೇಶದಲ್ಲಿ ಲಸಿಕೆ ಅಭಿಯಾನದ ಯಶಸ್ಸಿಗೆ ಕೈ ಜೋಡಿಸಬೇಕೆಂದು ಕರೆ‌ ನೀಡಿದರು.

ಈ ಸಂದರ್ಭದಲ್ಲಿ ತೇರಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸ್ಟ್ಯಾನ್ಲಿ, ಸಾರ್ವಜನಿಕ ಆರೋಗ್ಯ ಇಲಾಖೆಯ ವಸಂತ, ಚನ್ನಬಸವರಾಜ್, ಅಲ್ತಾಫ್, ಅಂಗನವಾಡಿ ಮೇಲ್ವಿಚಾರಕಿ ರಾಜೇಶ್ವರಿ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.