ಭಟ್ಕಳ: ಭಟ್ಕಳ ತಾಲೂಕಾ ಜೆಡಿಎಸ್ ಅಧ್ಯಕ್ಷರಾಗಿದ್ದ ಮಂಜುನಾಥ ಗೊಂಡ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆ ವೇಳೆಯಲ್ಲಿ ವಕೀಲರಾದ ಮಂಜುನಾಥಗೊಂಡರನ್ನು ಭಟ್ಕಳ ತಾಲೂಕಾ ಜ್ಯಾತ್ಯಾತೀತ ಜನತಾದಳ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಇವರು ಸದ್ಯ ತಮ್ಮ ವೈಯಕ್ತಿಕ ಕಾರಣಕ್ಕಾಗಿ ಭಟ್ಕಳ ತಾಲೂಕಾ ಜೆಡಿಎಸ್
ಅಧ್ಯಕ್ಷ ಸ್ಥಾನಕ್ಕೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಅಂಗೀಕರಿಸುವಂತೆ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಗಣಪಯ್ಯ ಗೌಡರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.