ದಾಂಡೇಲಿ : ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಎಲ್ಲಿಯೂ ಇರುವುದಿಲ್ಲ. ಈ ನಿಟ್ಟಿನಲ್ಲಿ ಈಗಾಗಲೆ ಮೂರು ಬಾರಿ ಮನವಿ ಪತ್ರ ಸಲ್ಲಿಸಲಾಗಿದೆ. ಆದರೂ ಈವರೇಗೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಕೊನೆಪಕ್ಷ ನಾಲ್ಕನೇ ಮನವಿಗಾದರೂ ಸ್ಪಂದಿಸಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪುತ್ಥಳಿ ಪ್ರತಿಷ್ಟಾಪನೆ ಮಾಡಲು ಸೂಕ್ತ ಜಾಗ ನಿಗಧಿಪಡಿಸುವಂತೆ ಕೋರಿ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಬುಧವಾರ ನಗರ ಸಭೆಯ ವ್ಯವಸ್ಥಾಪಕರಾದ ಪರಶುರಾಮ ಶಿಂಧೆಯವರ ಮೂಲಕ ಲಿಖಿತ ಮನವಿ ನೀಡಿ ಆಗ್ರಹಿಸಲಾಯ್ತು.
ನಗರ ಸಭೆಗೆ ನೀಡಿದ ಮನವಿಯಲ್ಲಿ ನಗರದ ಅಂಬೇವಾಡಿಯಲ್ಲಿ ನಿರ್ಮಾಣಗೊಂಡಿರುವ ತಾಲ್ಲೂಕು ಮಿನಿ ವಿಧಾನ ಸೌಧದ ಹತ್ತಿರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪುತ್ಥಳಿಯನ್ನು ಪ್ರತಿಷ್ಟಾಪನೆ ಮಾಡಲು ಜಾಗ ನಿಗಧಿಪಡಿಸಬೇಕು. ಈ ಬಗ್ಗೆ ಒಂದು ತಿಂಗಳೊಳಗೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ಪ್ರತಿಭಟನೆ ಅನಿವಾರ್ಯ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷರಾದ ದುಂಡಪ್ಪಾ ಪಾಟೀಲ್, ನಿಂಗೇಶ್ ಅರಬಣ್ಣವರ್, ಮಂಜುನಾಥ್ , ಅಶೋಕ್ ಕಂಟೆಗೋಳ, ಸಂಜು ಪವಾರ್ ಮೊದಲಾದವರು ಉಪಸ್ಥಿತರಿದ್ದರು.