ಸೈಬರ್ ಅಪರಾಧ ಜಾಗೃತಿ ಮತ್ತು ಮಾದಕ ದ್ರವ್ಯ ವಿರೋಧಿ ದಿನಾಚರಣೆ

ದಾಂಡೇಲಿ : ಪೊಲೀಸ್ ಇಲಾಖೆಯ ಆಶ್ರಯದಡಿ ನಗರದ ಬಂಗೂರನಗರ ಪದವಿ ಮಹಾವಿದ್ಯಾಲಯದಲ್ಲಿ ಸೈಬರ್ ಅಪರಾಧ ಜಾಗೃತಿ ಮತ್ತು ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.

ದಾಂಡೇಲಿ ನಗರ ಪೊಲೀಸ್ ಠಾಣೆಯ ಪಿಎಸ್ಐ ಐ.ಆರ್.ಗಡ್ಡೇಕರ್ ಹಾಗೂ ತನಿಕ ವಿಭಾಗದ ಪಿಎಸ್ಐ ಯಲ್ಲಪ್ಪ. ಎಸ್ ಅವರು ಭಾಗವಹಿಸಿ ಸೈಬರ್ ಅಪರಾಧದ ಬಗ್ಗೆ ಜಾಗೃತಿಯನ್ನು ಮೂಡಿಸಿದರು. ಇದೇ ಸಂದರ್ಭದಲ್ಲಿ ಮಾದಕ ದ್ರವ್ಯ ಸೇವನೆಯಿಂದ ವೈಯಕ್ತಿಕ ಆರೋಗ್ಯದ ಜೊತೆಗೆ ಸಮಾಜದ ಸ್ವಾಸ್ಥ್ಯ ಕದಡುವ ಬಗ್ಗೆಯೂ ವಿವರಣೆಯನ್ನು ನೀಡಿ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ.ಬಿ.ಎಲ್.ಗುಂಡೂರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ವೃಂದ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.