ಹಳಿಯಾಳ : ತಾಲ್ಲೂಕಿನ ತಹಶೀಲ್ದಾರ್ ಲೋಕೇಶ್ ಅವರಿಗೆ ವರ್ಗಾವಣೆಯಾಗಿದೆ. ಕಳೆದ ಕೆಲ ತಿಂಗಳುಗಳಿಂದ ಹಳಿಯಾಳ ತಾಲ್ಲೂಕಿನ ತಹಶೀಲ್ದಾರರಾಗಿ ಅನುಪಮ ಸೇವೆಯನ್ನು ಸಲ್ಲಿಸಿದ್ದರು.
ಅತ್ಯುತ್ತಮ ಕಾರ್ಯನಿರ್ವಹಣೆ, ದಕ್ಷತೆ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಿಕೆಯ ಮೂಲಕ ಅತ್ಯಲ್ಪ ಅವಧಿಯಲ್ಲೆ ಜನಸ್ನೇಹಿ ಅಧಿಕಾರಿಯಾಗಿ ಗಮನ ಸೆಳೆದಿದ್ದರು. ಇದೀಗ ಅವರನ್ನು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆಗೆ ವರ್ಗಾವಣೆಗೊಳಿಸಲಾಗಿದೆ.