ಬೆಂಗಳೂರು,: ಕಾಣೆಯಾಗಿದ್ದ ಕಲಬುರಗಿ ಮೂಲದ ಯುವತಿ ಮೃತದೇಹ ಮರುದಿನ ಮನೆ ಮುಂದೆ ಪತ್ತೆಯಾಗಿದೆ. ಬೆಂಗಳೂರಿನ ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಶೆಲ್ ಪೆಟ್ರೋಲ್ ಬಂಕ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಲಬುರಗಿ ಮಹಾನಂದಾ (21) ಎಂಬ ಯುವತಿ ನಿನ್ನೆ ಕಾಣೆಯಾಗಿದ್ದಳು. ಆದ್ರೆ, ಮರು ದಿನ ಅಂದರೆ ಇಂದು ನಸುಕಿನಲ್ಲಿ ಮನೆ ಮುಂದೆ ಯುವತಿಯ ಶವ ಪತ್ತೆಯಾಗಿದ್ದು, ಅಕ್ಕಪಕ್ಕದ ಮನೆಯವರು ಮೃತದೇಹ ನೋಡಿ ಶಾಕ್ ಆಗಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಘಟನಾ ಸ್ಥಳಕ್ಕೆ ಸೀನ್ ಆಫ್ ಕ್ರೈಮ್ ಅಫೀಸರ್ಸ್ ಮತ್ತು ಮಹದೇವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ. ಇದರಿಂದ ಯುವತಿ ಸಾವಿನ ಹಿಂದೆ ಹಲವು ಅನುಮಾನಗಳು ಮೂಡಿದ್ದು, ಈ ಬಗ್ಗೆ ಪೊಲಿಸರು ತನಿಖೆ ನಡೆಸಿದ್ದಾರೆ.