ಯುವ ಜನಾಂಗ ಸಾಮಾಜಿಕ ಪ್ರಜ್ಞೆಯನ್ನು ಅಳವಡಿಸಿಕೊಳ್ಳಲು ಎಂ. ಆರ್. ನಾಯಕ ಕರೆ


ಅಂಕೋಲಾ: ಪ್ರಪಂಚದಲ್ಲಿ ಅತಿ ಹೆಚ್ಚು ಯುವ ಸಮುದಾಯವನ್ನು ಹೊಂದಿರುವ ಭಾರತವು ಅಭಿವೃದ್ಧಿ ಮಾರ್ಗದಲ್ಲಿ ಮುನ್ನಡೆಯಲು ಯುವಕರು ಸಾಮಾಜಿಕ ಪ್ರಜ್ಞೆಯನ್ನು ಅಳವಡಿಸಕೊಳ್ಳುವುದು ಅಗತ್ಯವಿದೆ ಎಂದು ಹೊನ್ನಾವರ ಎಸ್.ಡಿ.ಎಂ. ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಯಕ್ಷಗಾನ ಕಲಾವಿದ ಎಂ. ಆರ್. ನಾಯಕ ಹೇಳಿದರು.
ಶುಕ್ರವಾರ ಪಟ್ಟಣದ ಗೋಖಲೆ ಸೆಂಟಿನರಿ ಕಾಲೇಜಿನಲ್ಲಿ ವಾರ್ಷಿಕ ಸ್ನೇಹದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ತಂದೆ ತಾಯಿಗಳನ್ನು ಗೌರವಿಸುವ ನಮ್ಮ ಪರಂಪರೆ ಮಸುಕಾಗುತ್ತಿರುವುದು ಕಳವಳಕಾರಿಯಾಗಿದೆ. ಜನನಿ ಮತ್ತು ಜನ್ಮ ಭೂಮಿಯನ್ನು ಗೌರವಿಸದ ವ್ಯಕ್ತಿ ಎಷ್ಟೇ ವಿದ್ಯೆ ಪಡೆದರು ನಿಷ್ಪೃಯೋಜಕವಾಗುತ್ತದೆ ಎಂದು ಹೇಳಿದರು.
ಸನ್ಮಾನ; ಇದೆ ಸಂದರ್ಭದಲ್ಲಿ ಗಡಿ ಭದ್ರತಾ ಪಡೆಯ ನಿವೃತ್ತ ಯೋಧ ಅಲಗೇರಿಯ ಆನಂದು ಗಾಂವಕರ ಅವರನ್ನು ಎನ್. ಎಸ್. ಎಸ್. ಘಟಕ ಮತ್ತು ಮಹಾವಿದ್ಯಾಲಯದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಪ್ರತಿಕ್ರಿಯಿಸಿದ ಆನಂದು ಅವರು ಯುವಕರು ಅಗ್ನಿಪಥ ಯೋಜನೆಯ ಪ್ರಯೋಜನ ಪಡೆದುಕೊಂಡು ದೇಶ ಸೇವೆಗೆ ಮುಂದಾಗಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿದ್ಯಾರ್ಥಿನಿಯರಾದ ಕ್ಷಮಾ ಮತ್ತು ಹಾಗೂ ಸಂಗಡಿಗರು ಪ್ರಾರ್ಥನೆ ಹಾಡಿದರು. ಯುನಿಯನ್ ಮುಖ್ಯಸ್ಥರಾದ ಪ್ರೊ. ಮಂಜುನಾಥ ಪಾಟೀಲ್ ಸ್ವಾಗತಿಸಿದರು. ಪ್ರಾಚಾರ್ಯ ಡಾ. ಎಸ್. ವಿ. ವಸ್ತ್ರದ್ ಅಧ್ಯಕ್ಷತೆ ವಹಿಸಿದ್ದರು. ಡಾ. ಎಸ್.ಆರ್.ಶಿರೋಡಕರ, ಆರ್. ಪಿ. ಭಟ್ ವರದಿ ವಾಚಿಸಿದರು. ಪನ್ನಗ ನಾಯಕ ನಿರೂಪಿಸದರೆ, ಡಾ. ಆರ್. ಅಶ್ವಿನ ವಂದಿಸಿದರು