ದಾಂಡೇಲಿ : ನಗರದ ಪಾಟೀಲ್ ಆಸ್ಪತ್ರೆಯಲ್ಲಿ ಹುಬ್ಬಳ್ಳಿಯ ನೋವಾ ಐವಿಎಫ್ ಫರ್ಟಿಲಿಟಿ ಆಸ್ಪತ್ರೆಯ ಆಶ್ರಯದಡಿ ಇದೇ ಬರುವ ಆಗಸ್ಟ್ : 26ರ ಶನಿವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಉಚಿತ ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಉಚಿತ ವೈದ್ಯಕೀಯ ಸಲಹೆಯನ್ನು ನೀಡಲಾಗುತ್ತದೆ.
ಈ ಶಿಬಿರದಲ್ಲಿ ಐವಿಎಫ್ ಫರ್ಟಿಲಿಟಿ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ವಿನುತಾ ಕುಲಕರ್ಣಿ ಹಾಗೂ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ತಾಲ್ಲೂಕು ಸೇರಿದಂತೆ ಸುತ್ತಮುತ್ತಲ ಸಾರ್ವಜನಿಕರು ಭಾಗವಹಿಸಿ ಶಿಬಿರದ ಲಾಭವನ್ನು ಪಡೆದುಕೊಳ್ಳುವಂತೆ ನಗರದ ಪಾಟೀಲ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಮೋಹನ್ ಪಾಟೀಲ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.