ಜೋಯಿಡಾ : ಸ್ವಾತಂತ್ರೋತ್ಸವ ಆಚರಣೆಯ ಕುರಿತಂತೆ ಈವರೇಗೆ ನಡೆದ ಪೂರ್ವತಯಾರಿ ಬಗ್ಗೆ ಇಂದು ಜೋಯಿಡಾ ತಾಲ್ಲೂಕು ಕೇಂದ್ರದಲ್ಲಿರುವ ತಹಶೀಲ್ದಾರ್ ಕಾರ್ಯಾಲಯದಲ್ಲಿ ಪೂರ್ವಸಿಧ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ತಹಶೀಲ್ದಾರ್ ರಾಜೇಶ್ ಚೌವ್ಹಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ವಿಜೃಂಭಣೆಯಿಂದ ಸ್ವಾತಂತ್ರೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ. ಈ ಬಾರಿಯೂ ಸ್ವಾತಂತ್ರೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ತಾಲ್ಲೂಕಾಡಳಿತ ಜೊತೆ ಕೈ ಜೋಡಿಸಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ಜೋಯಿಡಾ ಗ್ರಾ.ಪಂ ಉಪಾಧ್ಯಕ್ಷ ಸಂತೋಷ್ ಮಂಥೆರೊ, ಸಿಪಿಐ ನಿತ್ಯಾನಂದ ಪಂಡಿತ್, ಉಪ ತಹಶೀಲ್ದಾರ್ ಸಂಜೀವ್ ಭಜಂತ್ರಿ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಯ ಕಿರಿಯ ಅಭಿಯಂತರರಾದ ಪ್ರವೀಣ್, ಲೋಕೋಪಯೋಗಿ ಇಲಾಖೆಯ ಇಲಾಖೆಯ ಕಿರಿಯ ಅಭಿಯಂತರರಾದ ಅರುಣ್, ರಾಜ್ಯ ಸರಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾದ ಎಸ್.ಆರ್. ಸಾಳುಂಕೆ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷರಾದ ಪಾಂಡುರಂಗ ಪಟಗಾರ, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಯಶವಂತ ನಾಯ್ಕ, ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಸಂಘಟನೆಯ ತಾಲೂಕು ಅಧ್ಯಕ್ಷ ಶ್ರೀಕಾಂತ್ ಹರಿಜನ, ಮರಾಠಾ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಕಾಂತ ದೇಸಾಯಿ ಮೊದಲಾದವರು ಉಪಸ್ಥಿತರಿದ್ದರು.