ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ

ನವದೆಹಲಿ: ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತದ ಕ್ರೀಡಾಪಟುಗಳ ಪದಕದ ಬೇಟೆ ಮುಂದುವರೆದಿದೆ. ಈಗಾಗಲೇ ಒಂದು ಚಿನ್ನದ ಪದಕವನ್ನು ಭಾರತ ಮುಡಿಗೇರಿಸಿಕೊಂಡಿತ್ತು. ಈ ಬೆನ್ನಲ್ಲೇ ವೇಟ್ ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗಾ ಪುರುಷರ 67 ಕೆಜಿ ಫೈನಲ್ನಲ್ಲಿ ಚಿನ್ನ ಗೆದ್ದಿದ್ದಾರೆ. ಈ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಪ್ರಸ್ತುತ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಒಟ್ಟು 5 ಪದಕಗಳು ಭಾರತದ ಮುಡಿಗೇರಿದೆ.