ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆಯಂದು KSRTC ಬಸ್​​ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು ಆಗಸ್ಟ್​ 21ರಿಂದ ಸೆಪ್ಟೆಂಬರ್​ 2ರವರೆಗೆ ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್ಆರ್​​ಟಿಸಿ ನಿಗಮವು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಈ ಕುರಿತಾಗಿ ಕೆಎಸ್​ಆರ್​​ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶಪತ್ರ ತೋರಿಸು ಮೂಲಕ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ನಿಗಮದ ನಗರ ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.ಸಿಬಿಎಸ್​ಇ 12ನೇ ತರಗತಿ ಪೂರಕ ಪರೀಕ್ಷೆಯು ಜುಲೈ 17 2023 ರಂದು ನಡೆಸಲಾಗಿತ್ತು. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್​ ಆಗಸ್ಟ್ 01 ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ 12 ನೇ ತರಗತಿಯ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿತ್ತು.

ನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಉಪನ್ಯಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಇತ್ತೀಚೆಗೆ ಪ್ರಕಟಿಸಿತ್ತು. 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಈ ಪರೀಕ್ಷೆಗೆ ನೋಂದಾಯಿಸಲು ಅರ್ಹತೆ ಪಡೆದಿರುತ್ತಾರೆ.

2ನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ.  

  • ಆ. 21ರಂದು ಕನ್ನಡ, ಅರೇಬಿಕ್
  • ಆ. 22 ಐಚ್ಛಿಕ ಕನ್ನಡ, ಕೆಮಿಸ್ಟ್ರಿ, ಬೇಸಿಕ್ ಮ್ಯಾಥ್ಸ್
  • ಆ. 23 ಸಮಾಜ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
  • ಆ. 24 ಲಾಜಿಕ್, ಹಿಂದೂಸ್ಥಾನಿ ಮ್ಯೂಸಿಕ್, ಬ್ಯುಸಿನೆಸ್ ಸ್ಟಡೀಸ್
  • ಆ. 25 ಇತಿಹಾಸ, ಸ್ಟಾಟಸ್ಟಿಕ್ಸ್
  • ಆ. 26 ಇನರ್ಮೇಷನ್ ಟೆಕ್ನಾಲಜಿ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇಸ್, ಬ್ಯೂಟಿ ಆಂಡ್ ವೆಲ್ನೆಸ್
  • ಆ. 28 ಜಿಯೋಗ್ರಾಫಿ, ಸೈಕಾಲಜಿ, ಫಿಜಿಕ್ಸ್
  • ಆ. 29 ಅಕೌಂಟ್ಸ್, ಜಿಯಾಲಜಿ, ಎಜುಕೇಷನ್, ಹೋಂ ಸೈನ್ಸ್
  • ಆ. 30 ಪೊಲಿಟಿಕಲ್ ಸೈನ್ಸ್, ಮ್ಯಾಥಮೆಟಿಕ್ಸ್
  • ಆ. 31 ಹಿಂದಿ
  • ಸೆಪ್ಟೆಂಬರ್.​ 1ರಂದು ಎಕನಾಮಿಕ್ಸ್, ಬಯಾಲಜಿ
  • ಸೆ. 2ರಂದು ತಮಿಳ್, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಹಾಗೂ ಫ್ರೆಂಚ್