ಸ್ವಾತಂತ್ರ್ಯದಿನದಲ್ಲಿ ಭಾಗಿಯಾಗಲು ಕಾರ್ಮಿಕರು, ರೈತರು, ಮೀನುಗಾರರಿಗೆ ಪ್ರಧಾನಿ ಮೋದಿ ವಿಶೇಷ ಆಹ್ವಾನ

ಈ ಬಾರಿ ಆಗಸ್ಟ್ 15ರಂದು ಕೆಂಪುಕೋಟೆ ಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಗೆ 1800 ವಿಶೇಷ ಅತಿಥಿಗಳನ್ನು  ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ. ಇವರಲ್ಲಿ ಕಾರ್ಮಿಕರು, ಮೀನುಗಾರರು, ಸರಪಂಚ್, ದಾದಿಯರು ಮತ್ತು ಶಿಕ್ಷಕರು ಸೇರಿದ್ದಾರೆ. ಹೊಸ ಸಂಸತ್ ಭವನದ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರನ್ನೂ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿದೆ. ದಂಪತಿ ಸಮೇತ ಕಾರ್ಯಕ್ರಮಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಇದೇ ವೇಳೆ ಕಿಸಾನ್ ಉತ್ಪಾದಕ್ ಸಂಘಟನೆ ಯೋಜನೆಯ ಫಲಾನುಭವಿ ರೈತರು ಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಪ್ರತಿ ರಾಜ್ಯ, ಕೇಂದ್ರಾಡಳಿತ ಪ್ರದೇಶದಿಂದ 75 ಜೋಡಿಗಳನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಕೆಂಪು ಕೋಟೆಯಲ್ಲಿ ನಡೆಯಲಿರುವ ಸಮಾರಂಭವನ್ನು ವೀಕ್ಷಿಸಲು ಆಹ್ವಾನಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ವಿಶೇಷ ಅತಿಥಿಗಳಾಗಿ ಸುಮಾರು 1,800 ಜನರನ್ನು ಅವರ ಸಂಗಾತಿ ಜತೆಗೆ ಆಹ್ವಾನಿಸಲಾಗಿದೆ.

ಸರ್ಕಾರದ ಸಾರ್ವಜನಿಕ ಸಹಭಾಗಿತ್ವದ ವಿಧಾನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ತೆಗೆದುಕೊಳ್ಳಲಾಗಿದೆ. ರಾಷ್ಟ್ರೀಯ ಯುದ್ಧ ಸ್ಮಾರಕ, ಇಂಡಿಯಾ ಗೇಟ್, ವಿಜಯ್ ಚೌಕ್ ಸೇರಿದಂತೆ 12 ಸ್ಥಳಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳು ಮತ್ತು ಉಪಕ್ರಮಗಳಿಗೆ ಮೀಸಲಾಗಿರುವ ‘ಸೆಲ್ಫಿ ಪಾಯಿಂಟ್’ಗಳನ್ನು ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. 1800 ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗಿದೆ.

ದೇಶಾದ್ಯಂತ ವಿವಿಧ ವೃತ್ತಿಗಳಿಗೆ ಸೇರಿದ 1,800 ಜನರನ್ನು ಕೆಂಪು ಕೋಟೆಯಲ್ಲಿ ಆಚರಿಸಲು ತಮ್ಮ ಸಂಗಾತಿಗಳೊಂದಿಗೆ ವಿಶೇಷ ಅತಿಥಿಗಳು ಎಂದು ಆಹ್ವಾನಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ವಿಶೇಷ ಅತಿಥಿಗಳಾಗಿ ಸುಮಾರು 1,800 ಜನರನ್ನು ಅವರ ಸಂಗಾತಿಗಳೊಂದಿಗೆ ಆಹ್ವಾನಿಸಲಾಗಿದೆ. ಸರ್ಕಾರದ ಸಾರ್ವಜನಿಕ ಸಹಭಾಗಿತ್ವ ವಿಧಾನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಖಾದಿ ಕಾರ್ಮಿಕರು, ಗಡಿ ರಸ್ತೆಗಳ ನಿರ್ಮಾಣ, ಅಮೃತ್ ಸರೋವರ ಮತ್ತು ಹರ್ ಘರ್ ಜಲ ಯೋಜನೆಗೆ ಸಂಬಂಧಿಸಿದ ಜನರು, ಪ್ರಾಥಮಿಕ ಶಾಲಾ ಶಿಕ್ಷಕರು, ದಾದಿಯರು ಮತ್ತು ಮೀನುಗಾರರೂ ಇರಲಿದ್ದಾರೆ. ಈ ಗೌರವಾನ್ವಿತ ಅತಿಥಿಗಳಲ್ಲಿ ಕೆಲವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ ಮತ್ತು ದೆಹಲಿಯಲ್ಲಿ ತಂಗಿರುವಾಗ ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಅವರನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ.