ಮೈಸೂರು: ಎರಡನೇ ತರಗತಿಯ ಶಾಲಾ ಬಾಲಕಿಯನ್ನು ಅಪರಿಚಿತ ವ್ಯಕ್ತಿಗಳು ಅಪಹರಣಕ್ಕೆ ಯತ್ನಿಸಿದ ಪ್ರಕರಣ ನಂಜನಗೂಡಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಾಲಕಿ ಶಾಲೆಯ ಶೌಚಾಲಯಕ್ಕೆ ತೆರಳಿದ್ದ ವೇಳೆ ಇಬ್ಬರು ಅಪರಿಚಿತರು ವಿದ್ಯಾರ್ಥಿನಿಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದ್ದಾರೆ. ಕೂಡಲೇ ಬಾಲಕಿ ಕಿರುಚಿಕೊಂಡಿದ್ದಾಳೆ. ಬಳಿಕ ಅಪರಿಚಿತರು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಅಪಹರಣಕ್ಕೆ ಯತ್ನಿಸಿದವರ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯಾವ ಕಾರಣಕ್ಕೆ ದುಷ್ಕರ್ಮಿಗಳು ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದಾರೆ ಎಂಬ ವಿಚಾರ ತಿಳಿದು ಬಂದಿಲ್ಲ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಶಾಲೆಯ ಮುಖ್ಯ ಶಿಕ್ಷಕರು ಹುಲ್ಲಹಳ್ಳಿ ಪೊಲೀಸ್ಠಾ ಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.