ಹಳಿಯಾಳ : ಪಟ್ಟಣದಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಿ ರಾಜೀವ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಇಂದು ಭಾನುವಾರ ಹಮ್ಮಿಕೊಳ್ಳಲಾಗಿತ್ತು.
ಶಾಸಕರಾದ ಆರ್.ವಿ. ದೇಶಪಾಂಡೆ ಅವರು ದಿ. ರಾಜೀವ ಗಾಂಧಿ ಮತ್ತು ದಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ಗೌರವವನ್ನು ಸಲ್ಲಿಸಿ ಮಾತನಾಡುತ್ತಾ, ರಾಷ್ಟ್ರಕ್ಕೆ ಮಾಜಿ ಪ್ರಧಾನಿ ರಾಜೀವ ಗಾಂಧಿ ಅವರ ಕೊಡುಗೆ ಸದಾ ಸ್ಮರಣೀಯ. ಅಂತಯೇ ನಾಡಿನ ಮುಖ್ಯಮಂತ್ರಿಯಾಗಿ ಬಡತನ ನಿರ್ಮೂಲನೆಗಾಗಿ ಶ್ರಮಿಸಿದ ನಾಯಕ ದೇವರಾಜ ಅರಸು ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಇಂಥವರ ಆದರ್ಶ, ಜೀವನ ವ್ಯಕ್ತಿತ್ವ ನಮಗೆಲ್ಲ ಪ್ರೇರಣಾದಾಯಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಪಾಟೀಲ್, ಪಕ್ಷದ ವಕ್ತಾರ ಉಮೇಶ್ ಬೋಳಶೆಟ್ಟಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು