ದಾಂಡೇಲಿ : ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕೊಂಕಣಿ ಅಧ್ಯಯನ ಪೀಠ ಸ್ಥಾಪನೆಯಾಗಲು ಆರ್.ವಿ.ದೇಶಪಾಂಡೆಯವರ ಪಾತ್ರ ಮಹತ್ವಪೂರ್ಣವಾಗಿದೆ ಎಂದು ದಾಂಡೇಲಿಯ ನಿವಾಸಿ ಹಾಗೂ ಕರ್ನಾಟಕ ರಾಜ್ಯ ಕೊಂಕಣಿ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಆರ್.ಪಿ.ನಾಯ್ಕ ಅವರು ಹೇಳಿದರು.
ಅವರು ಇಂದು ಭಾನುವಾರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ ಕೊಂಕಣಿ ಮಾನ್ಯತಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.