ದಾಂಡೇಲಿ : ಉತ್ತರ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ದಾಂಡೇಲಿಯ ಕಾಂಗ್ರೆಸ್ ಯುವ ಮುಖಂಡ ಅಬ್ದುಲ್ ಗನಿ ನಜೀರ್ ಅಹಮ್ಮದ್ ಶೇಖ್ ಇವರನ್ನು ನೇಮಕ ಮಾಡಲಾಗಿದೆ.
ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅಬ್ದುಲ್ ಗನಿ ನಜೀರ್ ಅಹಮ್ಮದ್ ಶೇಖ್ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಆರ್.ಹೆಗಡೆಯವರ ಸೂಚನೆಯಂತೆ ಶಾಸಕರಾದ ಆರ್.ವಿ.ದೇಶಪಾಂಡೆಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರ ಅನುಮೋಧನೆಯ ಮೇರೆಗೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸಂತೋಷ್.ಕೆ.ಶೆಟ್ಟಿ ಮತ್ತು ಉಪಾಧ್ಯಕ್ಷರಾದ ಸರ್ಪರಾಜ್ ಶೇಖ್ ಅವರು ನೇಮಕ ಮಾಡಿದ್ದಾರೆ.
ಯುವ ಕಾಂಗ್ರೆಸಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಅಬ್ದುಲ್ ಗನಿ ನಜೀರ್ ಅಹಮ್ಮದ್ ಶೇಖ್ ಅವರು ಪಕ್ಷ ಸಂಘಟನೆಗೆ ವಿಶೇಷ ಆಧ್ಯತೆಯನ್ನು ನೀಡುವ ಮೂಲಕ ಯುವ ಕಾಂಗ್ರೆಸ್ ಬಲವರ್ಧನೆಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದ್ದಾರೆ.



