ಹಳಿಯಾಳ : ತಾಲ್ಲೂಕಿನ ಅರ್ಲವಾಡ ಗ್ರಾಮದ 529 ಜನವಸತಿ ಮನೆಗಳಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಶ್ರಯದಲ್ಲಿ 2022-23 ನೇ ಸಾಲಿನ ಜಲ ಜೀವನ್ ಮಿಷನ್ ಯೋಜನೆಯಡಿ ಪೈಪ್ ಲೈನ್ ಅಳವಡಿಸಿ ನಳಸಂಪರ್ಕ ಕಲ್ಪಿಸಿ ಕುಡಿಯುವ ನೀರು ಪೂರೈಸುವ 120.00 ಲಕ್ಷ ರೂ.ಕಾಮಗಾರಿಗೆ ಶಾಸಕರಾದ ಆರ್.ವಿ.ದೇಶಪಾಂಡೆಯವರು ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರು, ಮುಖಂಡರು,ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಪರಶುರಾಮ ಗಸ್ತೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಇತರ ಪ್ರಮುಖರು ಉಪಸ್ಥಿತರಿದ್ದರು.




