ಸಿದ್ದಾಪುರ : ಭಟ್ಕಳದಲ್ಲಿ ವಕೀಲರಾದ ಗುರುದಾಸ ಮಂಜುನಾಥ ಮೊಗೇರ ಅವರ ಮೇಲೆ ನಡೆದ ಹಲ್ಲೆ ಖಂಡಿಸಿ, ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಸಿದ್ದಾಪುರ ನ್ಯಾಯವಾದಿಗಳ ಸಂಘದವರು ನ್ಯಾಯಲಯದ ಕಲಾಪಗಳಿಗೆ ಹಾಜರಾಗದೆ ಹೊರಗುಳಿದು ಪ್ರತಿಭಟನೆ ನಡೆಸಿದರು.
ತಾಲೂಕ ವಕೀಲರ ಸಂಘದ ಅಧ್ಯಕ್ಷ ಕೆ. ಜಿ. ನಾಯ್ಕ್ ರವರ ನೇತೃತ್ವದಲ್ಲಿ ಪ್ರತಿಭಟನೆನಡೆಸಿದರು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.