ಲಕ್ನೋ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿ ಮುಸ್ಲಿಮರು ಮಸೀದಿಯಲ್ಲಿ ನಮಾಜ್ ಮಾಡಿ ಪ್ರಾರ್ಥಿಸಿದ್ದಾರೆ.ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲಿ ಎಂದು ಮುಸ್ಲಿಮರು ಲಕ್ನೋದ ಇಸ್ಲಾಮಿಕ್ ಸೆಂಟರ್ ಆಫ್ ಇಂಡಿಯಾದಲ್ಲಿ ನಮಾಜ್ ಮಾಡಿದ್ದಾರೆ.ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್‌ಗಾಗಿ ಮುಸ್ಲಿಂ ಸಮುದಾಯದ ಸದಸ್ಯರು ಪ್ರಾರ್ಥನೆ ಸಲ್ಲಿಸುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದಕ್ಕೂ ಮುನ್ನ ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯಲು ವಾರಣಾಸಿಯ ಕಾಮಾಖ್ಯ ದೇವಸ್ಥಾನದಲ್ಲಿ ಹವನ ನಡೆಸಲಾಯಿತು.ಚಂದ್ರನ ಮೇಲಿನ ಕಾರ್ಯಾಚರಣೆಗಾಗಿ ಇಸ್ರೋ ಚಂದ್ರಯಾನ-3 ಮಿಷನ್ ಕೈಗೊಂಡಿದೆ. ಜು.14 ರಂದು ಚಂದ್ರಯಾನ-3 ನೌಕೆ ಉಡಾವಣೆ ಮಾಡಿತ್ತು. ನಾಳೆ ನೌಕೆಯನ್ನು ಚಂದ್ರನ ಮೇಲೆ ಲ್ಯಾಂಡಿಂಗ್ ಮಾಡಲು ದಿನಾಂಕ ನಿಗದಿಪಡಿಸಲಾಗಿದೆ.