ನಾಮಧಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಹೊನ್ನಾವರ: ಪಟ್ಟಣದ ನಾಮಧಾರಿ ಸಂಘದ ವಿದ್ಯಾರ್ಥಿನಿಲಯದಲ್ಲಿ ತಾಲೂಕಾ ನಾಮಧಾರಿ ಅಭಿವೃದ್ಧಿ ಸಂಘದಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಭಾನುವಾರ ಪ್ರತಿಭಾ ಪುರಸ್ಕಾರ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕಷ್ಟ, ಬಡತನ ಎಲ್ಲವೂ ಇರುತ್ತದೆ. ಆದರೆ ಅದನ್ನೆಲ್ಲ ಲೆಕ್ಕಿಸದೇ ಸಾಧನೆಯ ಕಡೆ ಗುರಿ ಹೊಂದಬೇಕು. ಆಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.

ತಾಲೂಕಾ ನೌಕರರ ಸಂಘದ ಅಧ್ಯಕ್ಷ ಆರ್.ಟಿ ನಾಯ್ಕ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯಕ್ಕನುಗುಣವಾದ ಕೊರ್ಸ್ ಆಯ್ಕೆ ಮಾಡಿ ಅದರಲ್ಲಿ ಪ್ರತಿಭೆಯನ್ನು ತೋರಿಸಬೇಕು. ತರಗತಿಗೆ ಬಂದು ಸರಿಯಾಗಿ ಪಾಠಗಳನ್ನ ಕೇಳಬೇಕು ಎಂದು ಕಿವಿಮಾತು ಹೇಳಿದರು.

ತಾಲೂಕಾ ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುದೀಶ್ ನಾಯ್ಕ ಮಾತನಾಡಿ ಇಂದು ವೇದಿಕೆಯಲ್ಲಿ ಪುರಸ್ಕಾರ ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಹ ಈ ಸಮಾಜದ ಋಣವನ್ನ ತೀರಿಸಬೇಕು. ಓರ್ವ ಉತ್ತಮ ವ್ಯಕ್ತಿಯಾಗಿ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂದರು.

ಎಸ್ ಎಸ್ ಎಲ್ ಸಿಯಲ್ಲಿ ಶೇ.90 ಅಧಿಕ ಅಂಕ ಪಡೆದ 125 ವಿದ್ಯಾರ್ಥಿಗಳು, ಪಿಯುಸಿಯಲ್ಲಿ ಶೇ.85 ಅಧಿಕ ಅಂಕ ಪಡೆದ 46 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

ತಾಲೂಕಾ ನಾಮಧಾರಿ ಅಭಿವೃದ್ದಿ ಸಂಘದ ಅಧ್ಯಕ್ಷ ಮಂಜುನಾಥ ನಾಯ್ಕ, ವಕೀಲ ಎಲ್. ಆರ್ ನಾಯ್ಕ
ನಿಕಟಪೂರ್ವ ಜಿ.ಪಂ ಸದಸ್ಯೆ ಪುಷ್ಪಾ ನಾಯ್ಕ, ನಿವೃತ್ತ ಸೈನಿಕ ವಾಮನ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.