ದಾಂಡೇಲಿ : ಭಾರತೀಯ ಬಾಹ್ಯಾಕಾಶ ವಿಜ್ಞಾನದ ಮುನ್ನಡೆಯ ಪ್ರತೀಕವಾದ ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ ಸರಣಿಯ ಮೂರನೇ ಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ಮೇಲ್ಮೈನಲ್ಲಿ ಇಳಿದಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಅಲ್ಲದೇ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದ್ದು. ಈ ಐತಿಹಾಸಿಕ ಸಾಧನೆಗೆ ದಾಂಡೇಲಿ ನಗರದ ಸೋಮಾನಿ ವೃತ್ತದಲ್ಲಿ ಸ್ಥಳೀಯರು ಪಟಾಕಿ ಸಿಡಿಸಿ, ಜೈಕಾರ ಹಾಕಿ ಸಂಭ್ರಮಿಸಿದರು.