ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಯಲ್ಲಾಪುರ:ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತಾಲೂಕಿನ ಬಳಗಾರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಶುಕ್ರವಾರ ನಡೆದಿದೆ.
ಹಳೆಯ ಟೈರ್, ಟ್ಯೂಬ್ ಗಳನ್ನು ತುಂಬಿಕೊಂಡು ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಲಾರಿ, ಬಳಗಾರ ಕ್ರಾಸ್ ಬಳಿಯ ತಿರುವಿನಲ್ಲಿ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಟೈರ್, ಟ್ಯೂಬ್ ಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಚಾಲಕ-ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.