ಚಿಕ್ಕಮಗಳೂರು : ಇಲ್ಲಿನ ಕಳಸ ತಾಲೂಕಿನ ಹೊರನಾಡು ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋದ ಆಟೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಶಾಲಾ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಶಾಲಾ ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಕಳಸ ಸರ್ಕಾರಿ ಆಸ್ಪತ್ರೆಗೆ ಮಕ್ಕಳನ್ನು ಕರೆತಂದಿದ್ದಾರೆ. ಗಾಯಗೊಂಡ ಮಕ್ಕಳಿಗೆ ಚಿಕಿತ್ಸೆ ಮುಂದುವರಿದಿದೆ. ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಸ್ತೆ ಗುಂಡಿ ಗಂಡಾಂತರ ನಿಲ್ಲುವಂತೆ ಕಾಣುತ್ತಿಲ್ಲ. ಯಮಸ್ವರೂಪಿ ರಸ್ತೆ ಗುಂಡಿಯಿಂದಾಗಿ ಸವಾರರ ಪ್ರಾಣಕ್ಕೆ ಕುತ್ತು ತಂದಿದೆ. ಅದಷ್ಟು ಬೇಗ ಸಂಬಂಧ ಪಟ್ಟವರು ಗುಂಡಿ ಮುಚ್ಚುವ ಕೆಲಸ ಮಾಡಬೇಕು. ಹದಗೆಟ್ಟಿರುವ ರಸ್ತೆ ಗುಂಡಿಗೆ ಮುಕ್ತಿ ನೀಡುವಂತೆ ಸಾರ್ವಜನಿಕರು ಮನವಿ ಮಾಡಿದರು.



