ಗೋಕರ್ಣ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೇಲೆಹಿತ್ತಲಿನಲ್ಲಿ ಸೋಮವಾರ ಬೆಳಗಿನ ಜಾವ ನಡೆ ನಡೆದಿದೆ. ರಮೇಶ ಸುಭಾಷ ಲಮಾಣಿ (32) ಆತ್ಮಹತ್ಯೆ ಶರಣಾದ ವ್ಯಕ್ತಿ.
ಹಾವೇರಿ ಮೂಲದ ರಮೇಶ್ ಬೇಲೆಹಿತ್ತಲನಲ್ಲಿ ಟ್ಯಾಟೂ ಅಂಗಡಿ ನಡೆಸುತ್ತಿದ್ದ. ಮನೆಯಲ್ಲಿ ಹೆಂಡತಿಯೊಂದಿಗೆ ಆಗಾಗ ಜಗಳವಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.